ADVERTISEMENT

ಒತ್ತಡ ನಿವಾರಣೆಗೆ ಕ್ರೀಡೆ ಪೂರಕ: ಎಂ.ಬಿ. ಚಿಕ್ಕನರಸಿಂಹಯ್ಯ

ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 14:19 IST
Last Updated 10 ಜನವರಿ 2020, 14:19 IST
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಅವರು ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಅವರು ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.   

ಚಿಕ್ಕಬಳ್ಳಾಪುರ: ‘ಸರ್ಕಾರಿ ನೌಕರರಿಗೆ ಏರ್ಪಡಿಸುವ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳು ಕೆಲಸದ ಒತ್ತಡ ನಿವಾರಿಸುವ ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯ, ಸಹಕಾರ ಮನೋಭಾವ ಮೂಡಿಸಲು ಸಹಕಾರಿಯಾಗುತ್ತವೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರು ನಿಯಮಿತವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಲ್ಲಾ ಸರ್ಕಾರಿ ನೌಕರರು ವರ್ಷಕ್ಕೆ ಒಮ್ಮೆಯಾದರೂ ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಕ್ರೀಡಾಕೂಟಕ್ಕೆ ಹೆಚ್ಚಿನ ಅನುದಾನ ನೀಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಕ್ರೀಡಾಕೂಟವನ್ನು ಹಬ್ಬದ ರೀತಿಯಲ್ಲಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಭರವಸೆ ನೀಡಿದರು.

ADVERTISEMENT

ಶಾಸಕ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್, ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಜಿಲ್ಲಾ ಖಜಾನಾಧಿಕಾರಿ ಮುನಿರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ ರಾಮಸ್ವಾಮಿ, ಕಾರ್ಯನಿರ್ವಣಾಧಿಕಾರಿ ಹರ್ಷವರ್ಧನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.