ADVERTISEMENT

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ’

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 6:36 IST
Last Updated 25 ಫೆಬ್ರುವರಿ 2026, 6:36 IST
ಚಿಂತಾಮಣಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಪ್ರೇರಣ ಕಾರ್ಯಕ್ರಮ ನಡೆಯಿತು
ಚಿಂತಾಮಣಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಪ್ರೇರಣ ಕಾರ್ಯಕ್ರಮ ನಡೆಯಿತು   

ಚಿಂತಾಮಣಿ: ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಪ್ರೇರಣ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ್ ಮಾತನಾಡಿ, 10ನೇ ತರಗತಿ ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಪರಿಶ್ರಮದಿಂದ ಚೆನ್ನಾಗಿ ಓದಿ ಒಳ್ಳೆಯ ಅಂಕಗಳನ್ನು ಗಳಿಸಬೇಕು. ಜಿಲ್ಲೆ ಮತ್ತು ರಾಜ್ಯದಲ್ಲಿ ನಮ್ಮ ತಾಲ್ಲೂಕು ಫಲಿತಾಂಶ ಪ್ರಥಮ ಸ್ಥಾನದಲ್ಲಿ ಬರುವಂತೆ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ADVERTISEMENT

ಮೈಸೂರಿನ ವಕೀಲ ಸುರೇಶರೆಡ್ಡಿ, ತಾವು ಹರಿದ ಬಟ್ಟೆ ಉಟ್ಟು ನಮಗೆ ಹೊಸ ಬಟ್ಟೆ ಕೊಡಿಸಿದ, ತಾವು ಹಳಸಿದ ಅನ್ನ ತಿಂದು ನಮಗೆ ಬಿಸಿ ಆಹಾರ ಕೊಟ್ಟ ತಂದೆ ತಾಯಿಗಳೇ ನಿಜವಾದ ಹೀರೋಗಳು. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.

ವಿದ್ಯಾರ್ಥಿಗಳು ಜೀವನ ಪೂರ್ತಿ ಅವರ ಸೇವೆ ಮಾಡಿದರು ಸಾಲದು. ತಂದೆ ತಾಯಿಗೆ ನೀವು ಏನಾದರೂ ಕೊಡುಗೆ ನೀಡಬೇಕು ಎಂದರೆ ಸಮಾಜದಲ್ಲಿ ಸತ್ಪ್ರಜೆಗಳಾಗಿ ಉತ್ತಮ ಸಾಧನೆ ಮಾಡಬೇಕು. ಬದುಕಿನಲ್ಲಿ ಪ್ರಾಮಾಣಿಕವಾಗಿ ನಡೆದುಕೊಂಡು ಉಪಯುಕ್ತ ಜೀವನ ಸಾಗಿಸುವುದೇ ನೀವು ಅವರಿಗೆ ಕೊಡುವ ಕಾಣಿಕೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಬಿಆರ್‌ಸಿ ಕೇಂದ್ರದ ಸಮನ್ವಯ ಅಧಿಕಾರಿ ಅಧಿಕಾರಿ ಗಿರಿಜಮ್ಮ, ಇಸಿಓ ಗಳಾದ ನಾಗರಾಜ್, ನಾಗೇಶ್, ದೇವಮ್ಮ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.