ADVERTISEMENT

ಚಿಕ್ಕಬಳ್ಳಾಪುರ: ನಾಳೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 13:43 IST
Last Updated 20 ಸೆಪ್ಟೆಂಬರ್ 2020, 13:43 IST
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಪರೀಕ್ಷಾ ಕೊಠಡಿಯೊಂದನ್ನು ವೈರಸ್‌ ನಾಶಕ ದ್ರಾವಣದಿಂದ ಶುಚಿಗೊಳಿಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಪರೀಕ್ಷಾ ಕೊಠಡಿಯೊಂದನ್ನು ವೈರಸ್‌ ನಾಶಕ ದ್ರಾವಣದಿಂದ ಶುಚಿಗೊಳಿಸಲಾಯಿತು.   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಾಗಿ ಒಂಬತ್ತು ಕೇಂದ್ರಗಳನ್ನು ಗುರುತಿಸಲಾಗಿದ್ದು, 4,250 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸೆ.21 ರಿಂದ 28ರ ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10.15 ರಿಂದ 1.30 ವರೆಗೆ, ಮಧ್ಯಾಹ್ನ 2.15 ರಿಂದ 5.30ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು ತಲಾ 2, ಚಿಂತಾಮಣಿ, ಶಿಡ್ಲಘಟ್ಟ, ಗುಡಿಬಂಡೆ ತಲಾ ಒಂದು ಕೇಂದ್ರ ತೆರೆದಿದೆ.

ಜಿಲ್ಲೆಯಲ್ಲಿ ಗಣಿತ ಪರೀಕ್ಷೆಗೆ 1,176, ಪ್ರಥಮ ಭಾಷೆ 402, ಸಮಾಜ ವಿಜ್ಞಾನ 509, ದ್ವಿತೀಯ ಭಾಷೆ 1,014, ತೃತೀಯ ಭಾಷೆ 366, ವಿಜ್ಞಾನ ಪರೀಕ್ಷೆಗೆ 783 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.

ADVERTISEMENT

ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯಲ್ಲಿರುವ ಸರಕಾರಿ ಪ್ರೌಢಶಾಲೆ, ಸಂತ ಜೋಸೆಫ್ ಕಾನ್ವೆಂಟ್ ಪ್ರೌಢಶಾಲೆ, ಬಾಗೇಪಲ್ಲಿಯ ಸರಕಾರಿ ಪ್ರೌಢಶಾಲೆ ಬಾಲಕರು, ಸರಕಾರಿ ಪ್ರೌಢಶಾಲೆ ಬಾಲಕಿಯರು, ಚಿಂತಾಮಣಿಯ ಸರಕಾರಿ ಪ್ರೌಢಶಾಲೆ ಬಾಲಕರು, ಗೌರಿಬಿದನೂರು ಸರಕಾರಿ ಪ್ರೌಢಶಾಲೆ (ಜಿಜೆಸಿ), ಸರಕಾರಿ ಪ್ರೌಢಶಾಲೆಯ ಬಾಲಕಿಯರು, ಗುಡಿಬಂಡೆ ಕರ್ನಾಟಕ ಪಬ್ಲಿಕ್ ಶಾಲೆ, ಶಿಡ್ಲಘಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ನಡೆಯಲಿವೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್‌ ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಗಳನ್ನು ವೈರಸ್‌ ನಾಶಕ ದ್ರಾವಣದಿಂದ ಶುಚಿಗೊಳಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.