ಪರೀಕ್ಷೆ–ಪ್ರಾತಿನಿಧಿಕ ಚಿತ್ರ
ಚಿಂತಾಮಣಿ: 2025ರ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಮೇ 26 ರಿಂದ ಜೂನ್ 2ರವರೆಗೆ ನಡೆಯಲಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಿ ಎಂದು ಎಸ್ಎಸ್ಎಲ್‌ಸಿ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
2023ರ ಪೂರಕ ಪರೀಕ್ಷೆಗೆ ನೋಂದಾಯಿಸಿದ್ದ ಮತ್ತು 2024ರ ಎಸ್ಎಸ್ಎಲ್‌ಸಿ ಪರೀಕ್ಷೆ ಪೂರ್ಣಗೊಳಿಸದ, 2025ರ ಪರೀಕ್ಷೆಗೆ ನೋಂದಾಯಿಸಿಕೊಂಡು ಗೈರಾಗಿರುವ ಹಾಗೂ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆಯಾ ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಮಂಡಳಿಯ ಜಾಲತಾಣದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಿ ಎಂದು ಸೂಚಿಸಲಾಗಿದೆ.
ಪರೀಕ್ಷಾ ನೋಂದಣಿಗೆ ಮೇ 10ರಂದು ಕೊನೆಯ ದಿನಾಂಕವಾಗಿದೆ. ಪರೀಕ್ಷೆ ವೇಳಾಪಟ್ಟಿಯನ್ನು ಮಂಡಳಿ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.