ADVERTISEMENT

ಶಿಡ್ಲಘಟ್ಟ: ಸಮ್ಮೇಳನಕ್ಕೆ ತೆರಳಿದ ಸರ್ಕಾರಿ ನೌಕರರು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 13:43 IST
Last Updated 27 ಫೆಬ್ರುವರಿ 2024, 13:43 IST
<div class="paragraphs"><p>ಶಿಡ್ಲಘಟ್ಟದ ಕೋಟೆ ವೃತ್ತದಿಂದ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಲು ಬೆಂಗಳೂರಿನ&nbsp; ಸಮ್ಮೇಳನಕ್ಕೆ ಹೊರಟ ಸರ್ಕಾರಿ ನೌಕರರ ಸಂಘದ ಸದಸ್ಯರು</p></div>

ಶಿಡ್ಲಘಟ್ಟದ ಕೋಟೆ ವೃತ್ತದಿಂದ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಲು ಬೆಂಗಳೂರಿನ  ಸಮ್ಮೇಳನಕ್ಕೆ ಹೊರಟ ಸರ್ಕಾರಿ ನೌಕರರ ಸಂಘದ ಸದಸ್ಯರು

   

ಶಿಡ್ಲಘಟ್ಟ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಸಮ್ಮೇಳನದಲ್ಲಿ ಭಾಗಿಯಾಗಿ ವಿವಿಧ ಬೇಡಿಕೆ  ಈಡೇರಿಸುವಂತೆ ಒತ್ತಾಯಿಸಲು ಸರ್ಕಾರಿ ನೌಕರರ ಸಂಘದ ಸದಸ್ಯರು ಮಂಗಳವಾರ ನಗರದ ಕೋಟೆ ವೃತ್ತದಿಂದ ತೆರಳಿದರು.

ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು. 7ನೇ ವೇತನಾ ಯೋಜನೆಯ ಅನುಷ್ಠಾನಗೊಳಿಸುವುದು. ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆಗಾಗಿ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.

ADVERTISEMENT

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಕಾರ್ಯದರ್ಶಿ ಅಕ್ಕಲರೆಡ್ಡಿ, ಸಿ.ಎಂ.ಮುನಿರಾಜು, ಬಿ.ಆರ್.ನಾರಾಯಣಸ್ವಾಮಿ, ವೆಂಕಟರೆಡ್ಡಿ, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಗುರುರಾಜರಾವ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.