
ಪ್ರಜಾವಾಣಿ ವಾರ್ತೆ
ಶಿಡ್ಲಘಟ್ಟ: ರಾಷ್ಟ್ರೀಯ ಆವಿಷ್ಕಾರ ಅಭಿಯಾನ್ ಸಮಗ್ರ ಶಿಕ್ಷಣ ವತಿಯಿಂದ ನಡೆದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅಕ್ಷಯ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ. ರಮೇಶ್, ಪ್ರಥಮ ಸ್ಥಾನ ಪಡೆದ ಅಕ್ಷಯ ಅವರನ್ನು ಅವರ ಶಾಲೆಗೆ ಹೋಗಿ ಅಭಿನಂದಿಸಿದರು.
ಉತ್ತರ ಪ್ರದೇಶ ಮೂಲದ ಅಕ್ಷಯ, ಐದನೇ ತರಗತಿಯಲ್ಲಿ ಓದುತ್ತಿದ್ದು, ಆಕೆಯ ತಂದೆ ಅಮರನಾಥ್ ಮತ್ತು ತಾಯಿ ಪೂನಮ್ಮ 12 ವರ್ಷಗಳಿಂದ ಯಣ್ಣಂಗೂರು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.