ಬಾಗೇಪಲ್ಲಿ: ಪಟ್ಟಣದ ಮುಖ್ಯರಸ್ತೆಯ ಬಾಲಾಜಿ ಪ್ರಾವಿಜನ್ ಸ್ಟೋರ್ನಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮವಾಗಿದ್ದು, ಸುಮಾರು ₹ 1 ಕೋಟಿ ನಷ್ಟವಾಗಿದೆ.
ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿರುವ ಈ ಸ್ಟೋರ್ನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ನಂದಿಸಿದರು. ಆ ವೇಳೆಗೆ ಅಂಗಡಿಯಲ್ಲಿದ್ದ ₹ 20 ಲಕ್ಷ ನಗದು ಸೇರಿದಂತೆ ದಿನಸಿ ಪದಾರ್ಥಗಳು, ಕಂಪ್ಯೂಟರ್, ಸಿ.ಸಿ ಕ್ಯಾಮೆರಾ, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.