ADVERTISEMENT

ಬೂತ್ ಮಟ್ಟದಲ್ಲಿ ಬಿಜೆಪಿ ಬಲಗೊಳಿಸಿ

ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 4:44 IST
Last Updated 10 ಆಗಸ್ಟ್ 2020, 4:44 IST
ನಗರದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಎಸ್ಸಿ ಮೋರ್ಚಾ ಜಿಲ್ಲಾ ಸಭೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು
ನಗರದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಎಸ್ಸಿ ಮೋರ್ಚಾ ಜಿಲ್ಲಾ ಸಭೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟಿಸಲು ಎಸ್‌ಸಿ ಮೋರ್ಚಾದ ಎಲ್ಲ ಪದಾಧಿಕಾರಿಗಳು ಶ್ರಮಿಸಿಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಕಿವಿಮಾತು ಹೇಳಿದರು.

ನಗರದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಎಸ್‌ಸಿ ಮೋರ್ಚಾ ಜಿಲ್ಲಾ ಸಭೆಯಲ್ಲಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಬಲಗೊಳ್ಳುತ್ತಿದೆ. ಈಗಿನಿಂದಲೇ ಎಲ್ಲ ಕಾರ್ಯಕರ್ತರು, ಪದಾಧಿಕಾರಿಗಳು ಬೇರು ಮಟ್ಟದಲ್ಲಿ ಪಕ್ಷ ಸಂಘಟಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ವೆಂಕಟೇಶ್ ಮಾತನಾಡಿ, ಕೋವಿಡ್-19 ಲಾಕ್‍ಡೌನ್ ನಿಂದ ಇಡೀ ದೇಶದ ಬಡ ಹಾಗೂ ಮಾಧ್ಯಮ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನಪರವಾದ
ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ಕೋವಿಡ್-19 ಸಂಕಷ್ಟದಲ್ಲಿ ಜನತೆಗೆ ನೆರವಾಗಲು ಕೇಂದ್ರ ಸರ್ಕಾರ ‘ಆತ್ಮನಿರ್ಭರ ಭಾರತ್’ ಯೋಜನೆಯಡಿ ದೇಶದ ಜನತೆ ಸ್ವಾವಲಂಭಿಯಾಗಿ ಬದಕಲು ₹20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ್ದು, ರಾಜ್ಯ ಸರ್ಕಾರ ಕೂಡ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಅನೇಕ ಯೋಜನೆಗಳನ್ನು ಜಾರಿ ತಂದಿದ್ದಾರೆ. ಈ ಯೋಜನೆಗಳು ಕಟ್ಟ ಕಡೇ ವ್ಯಕ್ತಿ ಗೆ ತಲುಪವ ಕೆಲಸ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಹನುಮಂತಪ್ಪ, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಸ್. ಕೃಷ್ಣಾರೆಡ್ಡಿ, ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮಣ ಗುಪ್ತ, ಸ್ಲಂ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್.ನಾರಾಯಣಪ್ಪ ಜಿಲ್ಲಾ ರೈತ ಮೋರ್ಚಾ ಮಾಜಿ ಅಧ್ಯಕ್ಷ ರಾಮಣ್ಣ, ಜಿಲ್ಲಾ ಮಾಧ್ಯಮ ವಕ್ತಾರ ಮಧುಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.