
ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರಿನ ಸೇಂಟ್ ಥಾಮಸ್ ಶಾಲೆಯ 21ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ರಮೇಶ್ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮತ್ತು ಗೌರವದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ತಂದೆ, ತಾಯಿ, ಗುರುಗಳು ಮತ್ತು ಹಿರಿಯರಿಗೆ ಗೌರವ ತಂದುಕೊಡಬೇಕು’ ಎಂದು ಸಲಹೆ ನೀಡಿದರು.
ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ದೇಶಕ ಡಾ.ಸ್ಪುರ್ಜಿಯನ್, ಕೆ.ಎನ್.ಎಸ್.ಮಿಷನ್ ನ ರೆವರೆಂಡ್ ಸಂಕಲ್ಪ್ ಸ್ಯಾಮ್ ಮ್ಯಾಥೀವ್, ಗ್ರಾಮ ಪಂಚಾಯಿತಿ ಸದಸ್ಯ ಆರ್.ಎ.ಉಮೇಶ್, ಮುಖ್ಯ ಶಿಕ್ಷಕ ಬಿ.ಎ.ಆನಂದ್, ರೆವರೆಂಡ್ ಜೋಸ್ ಥಾಮಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.