ADVERTISEMENT

ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 1:56 IST
Last Updated 13 ನವೆಂಬರ್ 2020, 1:56 IST

ಚಿಕ್ಕಬಳ್ಳಾಪುರ: 2019-20ನೇ ಸಾಲಿನಡಿ 10ನೇ ತರಗತಿಯ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮಿನ್ಸ್-ಕಮ್-ಮೆರಿಟ್ ಸ್ಕಾಲರ್‌ಷಿಪ್ ಪರೀಕ್ಷೆಯು ಜ. 24ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಈ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಈ ಪರೀಕ್ಷೆಗಳಿಗೆ (http://kseeb.kar.nic.in) ವೆಬ್‌ಸೈಟ್‌ನಲ್ಲಿ ಮುಖ್ಯಶಿಕ್ಷಕರು ಲಾಗಿನ್ ಆಗಿ ನ. 30ರೊಳಗೆ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಪಾವತಿ ಮತ್ತು ಇತರೆ ಮಾಹಿತಿಯು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ವೆಬ್‍ಸೈಟ್‍ನಲ್ಲಿ ಲಭ್ಯವಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಹಂತದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮತ್ತು ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.