ADVERTISEMENT

ನ.18 ರಂದು ಬಚ್ಚೇಗೌಡ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 15:44 IST
Last Updated 14 ನವೆಂಬರ್ 2019, 15:44 IST
ಕೆ.ಪಿ.ಬಚ್ಚೇಗೌಡ
ಕೆ.ಪಿ.ಬಚ್ಚೇಗೌಡ   

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಸ್ಪರ್ಧೆಗೆ ಹಿಂದೇಟು ಹಾಕಿದ ಬಚ್ಚೇಗೌಡ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿ ಸ್ಪರ್ಧೆಗೆ ಅಣಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ನ.18 ರಂದು ಬಚ್ಚೇಗೌಡ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸ್ವತಃ ಕುಮಾರಸ್ವಾಮಿ ಅವರೇ ಕ್ಷೇತ್ರಕ್ಕೆ ಬಂದು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಹುರುದುಂಬಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT