ADVERTISEMENT

ವಸತಿ ನಿಲಯಕ್ಕೆ ಸಿವಿಲ್ ನ್ಯಾಯಾಧೀಶರ ದಿಢೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 5:03 IST
Last Updated 29 ಡಿಸೆಂಬರ್ 2022, 5:03 IST
ಶಿಡ್ಲಘಟ್ಟದ ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಮಂಗಳವಾರ ಸಂಜೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆ ಹನುಮಂತಪ್ಪ ಭೇಟಿ ನೀಡಿ ಮೂಲ ಸೌಲಭ್ಯ ಪರಿಶೀಲಿಸಿದರು
ಶಿಡ್ಲಘಟ್ಟದ ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಮಂಗಳವಾರ ಸಂಜೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆ ಹನುಮಂತಪ್ಪ ಭೇಟಿ ನೀಡಿ ಮೂಲ ಸೌಲಭ್ಯ ಪರಿಶೀಲಿಸಿದರು   

ಶಿಡ್ಲಘಟ್ಟ: ನಗರದ ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಮಂಗಳವಾರ ಸಂಜೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪಕರೆ ಹನುಮಂತಪ್ಪ ಭೇಟಿ ನೀಡಿ, ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿ, ‘ಗ್ರಾಮೀಣ ಪ್ರದೇಶದಿಂದ ಬಂದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಸಾಧನೆಯ ಮೂಲಕ ತಮ್ಮ ಪೋಷಕರಿಗೆ ಕೀರ್ತಿ ತರಬೇಕು’ ಎಂದು ಕಿವಿಮಾತು ಹೇಳಿದರು.

ವಸತಿ ನಿಲಯಗಳಲ್ಲಿ ಮಕ್ಕಳಿಗೆ ಅಗತ್ಯ ಸವಲತ್ತುಗಳ ಜೊತೆಗೆ ಓದಲುಸಾಕಷ್ಟು ಸಮಯಾವಕಾಶ ದೊರೆಯುತ್ತದೆ. ಓದುವ ಸಮಯದಲ್ಲಿವಿದ್ಯಾರ್ಥಿಗಳು ನಿರ್ಲಕ್ಷ್ಯ ಮಾಡದೆ, ಓದಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಬಿಸಿಎಂ ಅಧಿಕಾರಿ ನಾರಾಯಣಪ್ಪ, ಸಿಡಿಪಿಒ ನೌತಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.