ಮಂಚೇನಹಳ್ಳಿ: ಮಂಚೇನಹಳ್ಳಿಯಿಂದ ಗೌರಿಬಿದನೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ಬಳಿಯ ಪೆಟ್ರೋಲ್ ಪಂಪ್ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಭಾನುವಾರ ಪತ್ತೆಯಾಗಿದೆ.
ಬೆಂಗಳೂರಿನ ಥಣಿಸಂದ್ರದ ಮಧುಕುಮಾರ್ (27) ಮೃತಪಟ್ಟವರು.
ಮಧುಕುಮಾರ್ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಲೂಡಾರ್ಟ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಒಂದು ಹೆಣ್ಣು ಮತ್ತು ಐದು ತಿಂಗಳ ಗಂಡು ಮಗುವಿದೆ. ಮಂಚೇನಹಳ್ಳಿಯ ಹೊನ್ನಪ್ಪನಹಳ್ಳಿಯಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಮಧುಕುಮಾರ್ ಸ್ನೇಹಿತರ ಜೊತೆಗೆ ಬಂದಿದ್ದು, ಮರಕ್ಕೆ ನೇಣು ಬಿಗುದುಕೊಂಡು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಮಂಚೇನಹಳ್ಳಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.