ಶಿಡ್ಲಘಟ್ಟ: ಜೈ ಭಾರತ್ ಕರಾಟೆ ಆ‍್ಯಂಡ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಲಾಗಿದ್ದ ಒಂದು ತಿಂಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಬುಧವಾರ ಅರಳೇಪೇಟೆಯಲ್ಲಿರುವ ಬಸವೇಶ್ವರ ದೇವಾಲಯದ ಆವರಣದಲ್ಲಿ ನಡೆಯಿತು.
ಶಿಬಿರದಲ್ಲಿ 40ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಕರಾಟೆ, ಸ್ಕೇಟಿಂಗ್, ಡ್ಯಾನ್ಸ್, ಯೋಗ, ಜಿಮ್ನಾಸ್ಟಿಕ್ ಹಾಗೂ ಈಜು ಸೇರಿದಂತೆ ಹಲವು ಕ್ರೀಡಾ ಮತ್ತು ಶಾರೀರಿಕ ಚಟುವಟಿಕೆಗಳಲ್ಲಿ ತರಬೇತಿ ಪಡೆದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು.
ತರಬೇತುದಾರ ಅರುಣ್ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.