
ಸಾಂದರ್ಭಿಕ ಚಿತ್ರ
ಚಿಂತಾಮಣಿ: ಬರಗಾಲ ಘೋಷಣೆ ಆಗಿರುವುದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2023-24ನೇ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಘೋಷಿಸಿರುವ ಬರಪೀಡಿತ ತಾಲ್ಲೂಕುಗಳಲ್ಲಿ ಏಪ್ರಿಲ್ 11 ರಿಂದ ಮೇ 28 ರವರೆಗೆ ಒಟ್ಟು 41 ದಿನಗಳ ಕಾಲ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಆದೇಶಿಸಿ ಅನುದಾನ ಬಿಡುಗಡೆ ಮಾಡಿದೆ.
ಅಧಿಕಾರಿಗಳು ಶಾಲೆಗಳಲ್ಲಿ ಬಿಸಿಯೂಟ ವಿತರಣೆಗೆ ಅಗತ್ಯವಾದ ಪೂರ್ವಸಿದ್ಧತೆ ಮಾಡಿಕೊಂಡು ಅನುಷ್ಠಾನಗೊಳಿಸಲು ಮಾರ್ಗಸೂಚಿಯನ್ನು ನೀಡಿದೆ. ಬರಗಾಲಪೀಡಿತ ತಾಲ್ಲುಕು ವ್ಯಾಪ್ತಿಯ ಗ್ರಾಮಗಳಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದರೆ, ಹೆಚ್ಚು ಮಕ್ಕಳಿರುವ ಒಂದು ಶಾಲೆಯಲ್ಲಿ ಮಾತ್ರ ವ್ಯವಸ್ಥೆ ಮಾಡಬೇಕು. ಉಳಿದ ಶಾಲೆಗಳ ಮಕ್ಕಳನ್ನು ಹಾಗೂ 1 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಶಾಲೆಗಳ ಮಕ್ಕಳನ್ನು ಆ ಕೇಂದ್ರಕ್ಕೆ ಕಳಿಸುವಂತೆ ಸೂಚನೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.