ಚಿಂತಾಮಣಿ: ತಾಲ್ಲೂಕಿನ ಕೆಂಚಾರ್ಲಹಳ್ಳಿ ಠಾಣೆಯ ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದ ರಸ್ತೆ ಪಕ್ಕದಲ್ಲಿ ಸುಮಾರು 45 ವರ್ಷದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಗುರುವಾರ ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಇರಗಂಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಟ್ಲಪಲ್ಲಿ ಗ್ರಾಮದ ವೆಂಕಟರಮಣಪ್ಪ (45) ಎಂದು ಗುರುತಿಸಲಾಗಿದೆ.
ಬುಧವಾರ ತನ್ನ ಪತ್ನಿಯ ಜತೆ ವೆಂಕಟರಮಣಪ್ಪ ತಿಥಿ ಕಾರ್ಯಕ್ರಮಕ್ಕೆ ಎಸ್.ಕುರುಬರಹಳ್ಳಿ ಗ್ರಾಮಕ್ಕೆ ಹೋಗಿದ್ದರು. ಪತ್ನಿಯನ್ನು ಅದೇ ಗ್ರಾಮದಲ್ಲಿ ಬಿಟ್ಟು ಅಲ್ಲಿಂದ ಟೆಂಪೋದಲ್ಲಿ ಬಂದು ಆಲಪ್ಪಲ್ಲಿ ಗ್ರಾಮದಲ್ಲಿ ಇಳಿದು ಸ್ವಗ್ರಾಮ ಗುಂಟ್ಲಪಲ್ಲಿ ಗ್ರಾಮಕ್ಕೆ ಹೋಗುವುದಾಗಿ ಹೇಳಿ ಹೋದವರು ನೆರ್ನಹಳ್ಳಿ ಗ್ರಾಮದಲ್ಲಿ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತನ ಮಗ ಅಜಯ್ ಕುಮಾರ್ ದೂರು ನೀಡಿ, ಒದ್ದಾಡಿರುವುದು ಹಾಗೂ ತಲೆಗೆ ಸ್ವಲ್ಪ ಪೆಟ್ಟಾಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.