ADVERTISEMENT

‘ವಿವೇಕಾನಂದರ ಆದರ್ಶ ಪಾಲಿಸಿ’

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 2:08 IST
Last Updated 19 ಜನವರಿ 2021, 2:08 IST
ಗುಡಿಬಂಡೆ ಪಟ್ಟಣದ ಐಟಿಐ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನಡೆದ ಯುವ ಸಪ್ತಾಹದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸ.ನ. ನಾಗೇಂದ್ರ ಮಾತನಾಡಿದರು
ಗುಡಿಬಂಡೆ ಪಟ್ಟಣದ ಐಟಿಐ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನಡೆದ ಯುವ ಸಪ್ತಾಹದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸ.ನ. ನಾಗೇಂದ್ರ ಮಾತನಾಡಿದರು   

ಗುಡಿಬಂಡೆ: ‘ದೇಶವನ್ನು ಸದೃಢವಾಗಿ ಮುನ್ನೆಡಸಲು ಯುವಜನತೆಯು ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸ.ನ. ನಾಗೇಂದ್ರ ತಿಳಿಸಿದರು.

ಪಟ್ಟಣದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನಡೆದ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವಕರಿಗೆ ಮಾನಸಿಕ, ದೈಹಿಕ, ಆಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಎಂದು ಕರೆ ನೀಡುತ್ತಿದ್ದರು. ಆ ಮೂಲಕ ಭಾರತೀಯ ಸಂಸ್ಕೃತಿ ಉಳಿಸಿ-ಬೆಳೆಸಲು, ನವೋತ್ಸಾಹ ಮೂಡಿಸುತ್ತಿದ್ದರು. ಜೊತೆಗೆ, ಭಾರತೀಯ ಸಂಸ್ಕೃತಿಯ ಬಗ್ಗೆ ಗೌರವ ಮೂಡಿಸಿ ಸ್ವತಂತ್ರ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಈ ನಿಟ್ಟಿನಲ್ಲಿ ಅವರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಜೈ ಭಾರತ್ ಯುವಕ ಸಂಘದ ಅಧ್ಯಕ್ಷ ಬಿ. ಮಂಜುನಾಥ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದ ಗುಂಗಿನಲ್ಲಿ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇಡೀ ವಿಶ್ವಕ್ಕೆ ಮಾದರಿಯಾದ ನಮ್ಮ ದೇಶದ ಸಂಸ್ಕೃತಿಯನ್ನು ಯಾರು ಮರೆಯಬಾರದು ಎಂದು ಸಲಹೆ ನೀಡಿದರು.

ದೇಶಕ್ಕಾಗಿ ಶ್ರಮಿಸಿದಂತಹ ಮಹನೀಯರ ಜೀವನ ಚರಿತ್ರೆ ಓದಬೇಕು. ವಿದ್ಯಾರ್ಥಿಗಳು ಶಿಸ್ತು, ಸಂಯಮ ಬೆಳೆಸಿಕೊಂಡು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಪಡೆಯಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.