
ಚಿಂತಾಮಣಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು ಗುರುವಾರ ತಮ್ಮ ಕೈಗೆ ಕಪ್ಪು ಪಟ್ಟಿ ಧರಿಸಿ, ಕರ್ತವ್ಯ ನಿರ್ವಹಣೆ ಮಾಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕರೆ ಮೇರೆಗೆ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.
ಅಖಿಲ ಭಾರತ ಶಿಕ್ಷಕರ ಫೆಡರೇಶನ್ ನೇತೃತ್ವದಲ್ಲಿ ರಚನೆಯಾದ ‘ರಾಷ್ಟ್ರೀಯ ಅಖಿಲ ಭಾರತ ಶಿಕ್ಷಕರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ’ ತೀರ್ಮಾನದಂತೆ ಶುಕ್ರವಾರ ಒಂದು ದಿನ ರಾಜ್ಯದ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕರ್ತವ್ಯದಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಲಾಗಿತ್ತು.
ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ತಿದ್ದುಪಡಿ, ಸಮಾನ ಕೆಲಸಕ್ಕೆ ಸಮಾನ ವೇತನ, ರಾಷ್ಟ್ರದ ಎಲ್ಲ ಶಿಕ್ಷಕರಿಗೆ ಏಕರೂಪದ ವೇತನ ಜಾರಿಗೊಳಿಸಬೇಕು ಎಂಬುದು ಶಿಕ್ಷಕರ ಬೇಡಿಕೆಯಾಗಿದೆ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಅಶೋಕಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.