
ಪ್ರಜಾವಾಣಿ ವಾರ್ತೆ
ಗುಡಿಬಂಡೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಲೆಯಲ್ಲಿ ಕಪ್ಪುಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು.
ವಿವಿಧ ಗ್ರಾಮಗಳಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಒಂದು ವೇಳೆ ಸರ್ಕಾರ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಶಾಲೆ ಹಾಗೂ ತರಗತಿಗಳನ್ನು ಸಹ ಬಹಿಷ್ಕರಿಸಲಾಗುವುದು. ಕೂಡಲೇ, ನ್ಯಾಯಯುತವಾದ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.