ADVERTISEMENT

ಕೆಂಚಾರ್ಲಹಳ್ಳಿ ಗ್ರಾ.ಪಂ. ಅಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 5:58 IST
Last Updated 12 ಜೂನ್ 2022, 5:58 IST
ಗುಡಿಬಂಡೆ ಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ್ ಮಸ್ಕಿನ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಕೆ.ಎಂ. ಹರೀಶ್‌ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು
ಗುಡಿಬಂಡೆ ಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ್ ಮಸ್ಕಿನ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಕೆ.ಎಂ. ಹರೀಶ್‌ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು   

ಚಿಂತಾಮಣಿ: ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ನಡಂಪಲ್ಲಿ ರೋಜಾ ಮುನಿಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಂಚಾರ್ಲಹಳ್ಳಿ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ 9 ಹಾಗೂ ಕಾಂಗ್ರೆಸ್ ಬೆಂಬಲಿತ ನಾಲ್ವರು ಸೇರಿದಂತೆ ಒಟ್ಟು 13 ಸದಸ್ಯರಿದ್ದಾರೆ. ಅಧ್ಯಕ್ಷರಾಗಿದ್ದ ರಾಮಚಂದ್ರಪ್ಪ ರಾಜೀನಾಮೆ ನೀಡಿದ್ದರಿಂದ ಚುನಾವಣೆ ನಡೆಯಿತು.

ಚುನಾವಣೆಯಲ್ಲಿ ನಡಂಪಲ್ಲಿ ರೋಜಾ ಮುನಿಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ, ಚುನಾವಣಾಧಿಕಾರಿಯಾಗಿದ್ದ ಶ್ರೀನಿವಾಸ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ADVERTISEMENT

ಅಧ್ಯಕ್ಷರ ಆಯ್ಕೆ ಘೋಷಿಸುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಜೆಡಿಎಸ್ ಮುಖಂಡರಾದ ಬ್ಯಾಂಕ್ ಕೃಷ್ಣಾರೆಡ್ಡಿ, ನಂದನವನ ಶ್ರೀರಾಮರೆಡ್ಡಿ, ಕೆ.ಎಸ್. ವೆಂಕಟೇಶ್, ಕೆ.ಎಸ್. ಅಶೋಕ್, ಆಂಜನೇಯರೆಡ್ಡಿ, ನಡಂಪಲ್ಲಿ ರಾಜಾರೆಡ್ಡಿ, ಗ್ರಾ.ಪಂ. ಉಪಾಧ್ಯಕ್ಷೆ ವನಿತಾ, ಮಾಜಿ ಅಧ್ಯಕ್ಷ ರಾಮಚಂದ್ರ, ಸದಸ್ಯರಾದ ಡಿ. ಗಣೇಶ್, ವೆಂಕಟರಮಣ, ಮಲ್ಲಪ್ಪ, ಲಕ್ಷ್ಮಿನರಸಮ್ಮ, ಗಂಗಮ್ಮ, ಪಿಡಿಒ ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.