ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿನ ಆಶಾ ಕಾರ್ಯಕರ್ತೆಯರ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮಲ್ಲರ ಹೊಣೆಯಾಗಿದೆ‘ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಪಿಪಿಇ ಕೀಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಜಿಲ್ಲೆಯಯಲ್ಲಿ ಕೊರೊನಾ ವೈರಸ್ ಸೋಕು ನಿಯಂತ್ರಿಸುವಲ್ಲಿ ಯೋಧರಂತೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಪರಿಶ್ರಮ ಶ್ಲಾಘನೀಯವಾದದ್ದು. ಆದ್ದರಿಂದ ಆಶಾ ಕಾರ್ಯಕರ್ತೆಯರ ಸುರಕ್ಷತೆಗಾಗಿ ಜಿಲ್ಲಾ ಪಂಚಾಯಿತಿ ಮತ್ತು ಬೆಂಗಳೂರಿನ ಎನ್ವಿರಾನ್‌ಮೆಂಟ್ ಟ್ರಸ್ಟ್ ಸಹಯೋಗದಲ್ಲಿ ಪಿಪಿಇ ಕಿಟ್ ವಿತರಿಸಲಾಗುತ್ತಿದೆ’ ಎಂದು ಹೇಳಿದರು.
‘ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಮಾಜ ಋಣಿಯಾಗಿರಬೇಕು. ಇಂತಹ ಸಣ್ಣ ಸಹಾಯಗಳು ಅವರಲ್ಲಿ ಕೆಲಸ ಮಾಡುವ ಉತ್ಸಾಹ ಇಮ್ಮಡಿಗೊಳಿಸುವ ಜತೆಗೆ ಆರೋಗ್ಯ ಕಾಪಾಡಿಕೊಳ್ಳಲು ಅನುಕೂವಾಗುತ್ತದೆ’ ಎಂದರು.
‘ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇರುವುದರಿಂದ, ನಮ್ಮ ಜಿಲ್ಲೆಗೆ ಹೊರ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಬರುವ ಜನರ ಬಗ್ಗೆ ಮಾಹಿತಿ ಪಡೆಯಲು ಆಶಾ ಕಾರ್ಯಕರ್ತೆಯರು ವಿವಿಧ ಸ್ಥಳಗಳಲ್ಲಿ ಓಡಾಡುತ್ತಿರುತ್ತಾರೆ. ಆದ್ದರಿಂದ, ಅಂತಹವರ ಸುರಕ್ಷತೆಗಾಗಿ ಉಚಿತವಾಗಿ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಒಳಗೊಂಡ ಪಿಪಿಇ ಕಿಟ್ ನೀಡಲಾಗುತ್ತಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.