ADVERTISEMENT

ಜಿಲ್ಲೆಯಲ್ಲಿ ನಿಲ್ಲದ ಕೋವಿಡ್ ನಾಗಾಲೋಟ

ಭಾನುವಾರ ಒಂದೇ ದಿನ 42 ಪ್ರಕರಣಗಳು ವರದಿ, ಒಬ್ಬ ಯುವತಿ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 14:26 IST
Last Updated 12 ಜುಲೈ 2020, 14:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ 42 ಜನರಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದ್ದು, ಚಿಕ್ಕಬಳ್ಳಾಪುರ ತಾಲ್ಲೂಕಿನ 26 ವರ್ಷದ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಭಾನುವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ 25, ಬಾಗೇಪಲ್ಲಿ 9, ಚಿಂತಾಮಣಿ 3 ಮತ್ತು ಶಿಡ್ಲಘಟ್ಟ ತಾಲ್ಲೂಕಿನ ಐದು ಜನರಿಗೆ ಕೋವಿಡ್‌ ತಗುಲಿರುವುದು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ.

ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 122, ಬಾಗೇಪಲ್ಲಿ 72, ಚಿಂತಾಮಣಿ 54, ಗೌರಿಬಿದನೂರು 136, ಶಿಡ್ಲಘಟ್ಟ 27 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದೆ.

ADVERTISEMENT

ಸೋಂಕಿತರ ಪೈಕಿ ಈವರೆಗೆ 14 ಜನರು ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 227 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 171 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.