ADVERTISEMENT

ಜೆಡಿಎಸ್‌ ಅವಕಾಶವಾದಿ ಪಕ್ಷ: ಸುಧಾಕರ ಟೀಕೆ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಆರೋಪ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 11:51 IST
Last Updated 1 ಡಿಸೆಂಬರ್ 2019, 11:51 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ‘ದೇಶ ಮತ್ತು ರಾಜ್ಯದಲ್ಲಿ ಹೆಚ್ಚು ಅವಕಾಶವಾದಿ ರಾಜಕಾರಣ ಮಾಡಿರುವ ಪಕ್ಷ ಜೆಡಿಎಸ್‌ ಪಕ್ಷ ಮಾಡಿದೆ. ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ವಿಚಾರದಲ್ಲಿ ಯಾವುದನ್ನೂ ತಳ್ಳಿ ಹಾಕಲು ಆಗಲ್ಲ’ ಎಂದು ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಆರೋಪಿಸಿದರು.

ನಗರದಲ್ಲಿ ಭಾನುವಾರ ಪ್ರಚಾರ ಸಭೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದೆಡೆ ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ಮಾತನಾಡಿರುವೆ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಹೇಳುತ್ತಾರೆ. ಇನ್ನೊಂದೆಡೆ ಜೆಡಿಎಸ್‌ನವರು ಕಾಂಗ್ರೆಸ್‌ನವರೇ ಸ್ವಿಚ್ಛ್ಆಫ್‌ ಮಾಡಿ ನಮಗೆ ಬೆಂಬಲಿಸುತ್ತಾರೆ ಎನ್ನುತ್ತಾರೆ. ಇದರಿಂದ ನನಗೂ, ನನ್ನ ಕ್ಷೇತ್ರದ ಜನರು ಮಾತ್ರವಲ್ಲದೆ ಆ ಎರಡೂ ಪಕ್ಷದ ಕಾರ್ಯಕರ್ತರಿಗೂ ದ್ವಂದ್ವ ಸೃಷ್ಟಿಸಿದ್ದಾರೆ. ಅಂತಿಮವಾಗಿ ಯಾರ ಮೊಬೈಲ್ ಸ್ವಿಚ್ಡ್ಆಫ್‌ ಆಗುತ್ತದೋ ನನಗೆ ಗೊತ್ತಿಲ್ಲ. ನನಗೂ ಇದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT