ADVERTISEMENT

ಚಿಕ್ಕಬಳ್ಳಾಪುರ: ಸೋಂಕಿತರ ಸಂಖ್ಯೆ 2,380ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 13:15 IST
Last Updated 6 ಆಗಸ್ಟ್ 2020, 13:15 IST
ಚಿಕ್ಕಬಳ್ಳಾಪುರದ ಕೋವಿಡ್‌ ಆಸ್ಪತ್ರೆ
ಚಿಕ್ಕಬಳ್ಳಾಪುರದ ಕೋವಿಡ್‌ ಆಸ್ಪತ್ರೆ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ 117 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 2,380ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 48,352 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 45,381 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 43 ಜನರು ಮೃತಪಟ್ಟಿದ್ದು, 1,411 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಗುರುವಾರ 49 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 926 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.