ADVERTISEMENT

ಸೋಂಕಿತರ ಸಂಖ್ಯೆ 2,557ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 4:40 IST
Last Updated 10 ಆಗಸ್ಟ್ 2020, 4:40 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ 46 ಕೋವಿಡ್‌- 19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,557ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 50,825 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 47,643 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರಲ್ಲಿ ಈವರೆಗೆ 43 ಜನರು ಮೃತಪಟ್ಟಿದ್ದು, 1,546 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ADVERTISEMENT

ಭಾನುವಾರ 35 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 968 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.