ADVERTISEMENT

ಸೋಂಕಿತರ ಸಂಖ್ಯೆ 1,439ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 13:59 IST
Last Updated 26 ಜುಲೈ 2020, 13:59 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 81 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಮೃತಪಟ್ಟಿದ್ಧಾರೆ. ಈ ಮೂಲಕ ಕೋವಿಡ್‌ ಪ್ರಕರಣಗಳ ಸಂಖ್ಯೆ 1,439ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಭಾನುವಾರದ ವರೆಗೆ 36,924 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 34,387 ಮಂದಿ ವರದಿ ನೆಗೆಟಿವ್‌ ಬಂದಿದೆ. 4,719 ಜನರ ವರದಿ ಬರಬೇಕಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 31 ಜನರು ಮೃತಪಟ್ಟಿದ್ದು, 651 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಭಾನುವಾರ 30 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 757 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.