ADVERTISEMENT

ಚಿಕ್ಕಬಳ್ಳಾಪುರ: ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 12:28 IST
Last Updated 23 ಆಗಸ್ಟ್ 2020, 12:28 IST
ಚಿಕ್ಕಬಳ್ಳಾಪುರ ಕೋವಿಡ್ ಆಸ್ಪತ್ರೆ
ಚಿಕ್ಕಬಳ್ಳಾಪುರ ಕೋವಿಡ್ ಆಸ್ಪತ್ರೆ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ 91 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆಯಾಗಿದೆ.

ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 65,295 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 61,412 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 56 ಜನರು ಮೃತಪಟ್ಟಿದ್ದು, 2,754 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಭಾನುವಾರ 43 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 598 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.