ADVERTISEMENT

ಯುವ ಸಂಪನ್ಮೂಲದ ಸದ್ಬಳಕೆ ಅಗತ್ಯ

ರಾಷ್ಟ್ರೀಯ ಮಕ್ಕಳ ಶಿಬಿರದಲ್ಲಿ ಭಾಗವಹಿಸಿದ್ದ ಚಿಣ್ಣರಿಗೆ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 4:29 IST
Last Updated 23 ನವೆಂಬರ್ 2020, 4:29 IST
ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಕ್ಕಳ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಆರೋಗ್ಯ ಸಿಬ್ಬಂದಿಗೆ ಕೊರೊನಾ ವಾರಿಯರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಕ್ಕಳ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಆರೋಗ್ಯ ಸಿಬ್ಬಂದಿಗೆ ಕೊರೊನಾ ವಾರಿಯರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು   

ಶಿಡ್ಲಘಟ್ಟ: ‘ದೇಶದ ಅಭಿವೃದ್ಧಿಯು ಗುಣಮಟ್ಟದ ಮಾನವ ಸಂಪನ್ಮೂಲವನ್ನು ಅವಲಂಭಿಸಿದೆ. ಈ ನಿಟ್ಟಿನಲ್ಲಿ ಯುವ ಸಂಪನ್ಮೂಲವನ್ನು ಸರ್ವಶ್ರೇಷ್ಠ ಮಟ್ಟದಲ್ಲಿ ಸನ್ನದ್ಧಗೊಳಿಸಬೇಕಿದೆ’ ಎಂದು ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ತಿಳಿಸಿದರು.

ತಾಲ್ಲೂಕಿನ ಸುಗಟೂರು ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನವದೆಹಲಿಯ ರಾಷ್ಟ್ರೀಯ ಯುವ ಯೋಜನೆ, ಜಿಲ್ಲಾ ನೆಹರೂ ಯುವಕೇಂದ್ರ, ಬೆಂಗಳೂರಿನ ಗಾಂಧಿಭವನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ, ರಾಷ್ಟ್ರೀಯ ಮಕ್ಕಳ ಶಿಬಿರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ, ಆರೋಗ್ಯ ಕಾರ್ಯಕರ್ತೆಯರಿಗೆ ಕೊರೊನಾ ವಾರಿಯರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ, ಉತ್ತಮ ಸಂಸ್ಕಾರ, ಚಟುವಟಿಕೆಯುತ ಶಿಕ್ಷಣ ನೀಡುವುದರೊಂದಿಗೆ ಬದುಕಿನ ಶಿಕ್ಷಣ ನೀಡಬೇಕು. ಆ ಮೂಲಕ ದೈಹಿಕ, ಮಾನಸಿಕ, ಸಾಂಸ್ಕೃತಿಕ ಸದೃಢತೆಗಳಿಸಿಕೊಂಡು ಸ್ವಾವಲಂಬನೆಯಿಂದ ಬದುಕುವ ಗುಣ ಬೆಳೆಸಬೇಕು ಎಂದರು.

ADVERTISEMENT

ಶಿಡ್ಲಘಟ್ಟ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ ಮಾತನಾಡಿದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್. ಅಶ್ವತ್ಥಪ್ಪ ಅವರು ಶಾಲೆಗೆ ₹ 10 ಸಾವಿರ ಮೌಲ್ಯದ ಟೇಬಲ್‌ಗಳನ್ನು ಕೊಡಿಸಿದರು.

ಅಂತರರಾಷ್ಟ್ರೀಯ ಮಕ್ಕಳ ಶಿಬಿರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಎಸ್.ಆರ್. ಮೋಹನ್, ಎಸ್.ಎನ್. ಅನುಷಾ, ಎಸ್.ಎನ್. ಹೇಮಾ, ಎಸ್.ಕೆ. ದಾಕ್ಷಾಯಿಣಿ, ಎಸ್.ಆರ್. ಮೋನಿಕಾ, ಎಸ್.ಆರ್. ಶಿವಪ್ರಸಾದಾರಾಧ್ಯ, ಎಸ್.ಪಿ. ಧನುಷ್‌ಗೌಡ, ನಯನಾ, ಲಾವಣ್ಯ, ಎಸ್.ಎಂ. ನಂದಿನಿ, ಎಸ್.ಎನ್. ನಂದು ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ಜಂಗಮಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಶುಶ್ರೂಷಕಿ ಎನ್. ಆಶಾ, ಆರೋಗ್ಯ ಕಾರ್ಯಕರ್ತೆ ಭಾಗ್ಯಮ್ಮ, ಲಕ್ಷ್ಮಮ್ಮ ಅವರಿಗೆ ಕೊರೊನಾ ವಾರಿಯರ್ಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರಿಗೆ ಶಿಕ್ಷಕ ಸಂಘಟಕ್ ಪ್ರಶಸ್ತಿ ನೀಡಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಎಂ. ಶಂಕರಪ್ಪ, ಜಿಲ್ಲಾ ನೆಹರೂ ಯುವಕೇಂದ್ರದ ಯುವಪ್ರತಿನಿಧಿ ಎಚ್.ಸಿ. ಶ್ರೀಧರ್, ಸ್ವಯಂಸೇವಕ ವಿ. ಪ್ರಮೋದ್, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎನ್. ಅಶ್ವತ್ಥಪ್ಪ, ಭಾಗ್ಯಮ್ಮ ಅರುಣ್‌ಕುಮಾರ್, ಶಿವಶಂಕರಪ್ಪ, ಎಂ. ದೇವರಾಜು, ಎಂಪಿಸಿಎಸ್ ಅಧ್ಯಕ್ಷ ಮಂಜುನಾಥ್, ಎಸ್‌ಡಿಎಂಸಿ ಉಪಾಧ್ಯಕ್ಷ ಜಗದೀಶ್, ಸದಸ್ಯೆ ನರಸಮ್ಮ, ವಿನುತಾ, ಬಚ್ಚೇಗೌಡ, ನಾರಾಯಣಸ್ವಾಮಿ, ಮುನಿಕೃಷ್ಣಪ್ಪ, ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ. ನಾರಾಯಣಸ್ವಾಮಿ, ಅಂಗನವಾಡಿ ಕಾರ್ಯಕರ್ತೆ ಮಂಜುಳಮ್ಮ, ಜಯಂತಿ, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕ ಎ.ಬಿ. ನಾಗರಾಜು, ಲಕ್ಷ್ಮಯ್ಯ, ಬಿ. ನಾಗರಾಜು, ಶಿಕ್ಷಕಿ ತಾಜೂನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.