ADVERTISEMENT

ಚಿಂತಾಮಣಿ: ಜೂಜಾಟದಲ್ಲಿ ತೊಡಗಿದ್ದ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 15 ಜುಲೈ 2023, 5:25 IST
Last Updated 15 ಜುಲೈ 2023, 5:25 IST
ಚಿಂತಾಮಣಿಯ ನಗರಸಭೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪೌರಾಯುಕ್ತ ಜಿ.ಎನ್.ಚಲಪತಿ ಮಾತನಾಡಿದರು
ಚಿಂತಾಮಣಿಯ ನಗರಸಭೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪೌರಾಯುಕ್ತ ಜಿ.ಎನ್.ಚಲಪತಿ ಮಾತನಾಡಿದರು   

ಚಿಂತಾಮಣಿ: ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಪಲ್ಲಿ ಗ್ರಾಮದ ಬಳಿ ಗುರುವಾರ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಬಟ್ಲಹಳ್ಳಿ ಠಾಣೆಯ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಕಾಪಲ್ಲಿ ಗ್ರಾಮದ ನರಸಿಂಹ, ಗೌನಪಲ್ಲಿ ಗ್ರಾಮದ ಕೃಷ್ಣಾರೆಡ್ಡಿ, ಯರ್ರಯ್ಯಗಾರಹಳ್ಳಿ ಗ್ರಾಮದ ವೇಮನಾರಾಯಣ ಬಂಧಿತ ಆರೋಪಿಗಳು.
ಆರೋಪಿಗಳಿಂದ ನಗದು, ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬಟ್ಲಹಳ್ಳಿ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ ದಾಳಿ ನಡೆದಿದೆ. ಎಎಸ್‌ಐ ಬಾಬಾಜಾನ್, ಎಂ.ಪಿ.ಶ್ರೀನಾಥ್, ದೇವೇಂದ್ರಗೌಡ ಪಾಟೀಲ್, ರಮೇಶ ತಳವಾರ್, ಸಚಿನ್ ಕುಮಾರ್ ದಾಳಿಯ ತಂಡದಲ್ಲಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.