ಚಿಂತಾಮಣ: ಆರ್.ಕೆ ವಿಷನ್ ವಿದ್ಯಾ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಹುಲಿ ಸಂರಕ್ಷಣಾ ದಿನಾಚರಣೆ ಮಂಗಳವಾರ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಆರ್.ಪ್ರೇಮಲತಾ ಮಾತನಾಡಿ, ಹುಲಿಗಳ ಪ್ರಾಕೃತಿಕ ಆವಾಸಸ್ಥಾನಗಳ ಸಂರಕ್ಷಣೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ 2010ರಿಂದ ಪ್ರತಿವರ್ಷ ಜುಲೈ 29ರಂದು ಹುಲಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಹುಲಿ, ಚಿರತೆ, ಸಿಂಹಗಳಂತಹ ಪ್ರಾಣಿಗಳು ಕಾಡು ಮತ್ತು ಅಭಯಾರಣ್ಯದ ಪ್ರಮುಖ ಆಕರ್ಷಣೆಗಳಾಗಿವೆ. ಹುಲಿ ಸ್ವಾಭಾವಿಕ ಸೌಂದರ್ಯ, ಆತ್ಮವಿಶ್ವಾಸ ಮತ್ತು ಗಾಂಭೀರ್ಯದ ನಡಿಗೆಗೆ ಹೆಸರುವಾಸಿಯಾಗಿದೆ. ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಮತ್ತು ಜೀವ ವೈವಿಧ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ವಿದ್ಯಾರ್ಥಿಗಳು ಹುಲಿಗಳ ಜೀವನಕ್ಕೆ ಸಂಬಂಧಿಸಿದ ಮತ್ತು ಅವುಗಳ ಸಂರಕ್ಷಣೆಗಾಗಿ ಜನಜಾಗೃತಿ ಮೂಡಿಸುವ ಭಿತ್ತಿಪತ್ರ ಪ್ರದರ್ಶನ ಏರ್ಪಡಿಸಿದ್ದರು. ನಿರ್ದೇಶಕ ಜಿವಿಕೆ ರೆಡ್ಡಿ, ತನುಶ್ರೀರಾಮ್, ವರುಣ್ ಕೆ.ವಿ, ಶಿಕ್ಷಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.