ಚಿಕ್ಕಮಗಳೂರು: ಆರನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸುವಂತೆ ಕೆಎಸ್‌ಆರ್‌ಟಿಸಿನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮಾವಾರ ಆರನೇ ದಿನಕ್ಕೆ ಕಾಲಿಟ್ಟಿದೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಮುಷ್ಕರನಿರತರು ತಟ್ಟೆ, ಲೋಟಗಳನ್ನು ಬಡಿದು ಆಕ್ರೋಶ ವ್ಯಕ್ತಪಡಿಸಿದರು. ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನೂ ಕೂಗಿದರು.
ಪ್ರತಿಭಟನೆಯಲ್ಲಿ ನೌಕರರ ಕುಟುಂಬದವರೂ ಭಾಗಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.