ADVERTISEMENT

ಸಾರಿಗೆ ನೌಕರರ ಅರೆಬೆತ್ತಲೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 4:43 IST
Last Updated 14 ಡಿಸೆಂಬರ್ 2020, 4:43 IST
ಬಾಗೇಪಲ್ಲಿ ಬಸ್‌ನಿಲ್ದಾಣದಲ್ಲಿ ಸಾರಿಗೆ ನೌಕರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು
ಬಾಗೇಪಲ್ಲಿ ಬಸ್‌ನಿಲ್ದಾಣದಲ್ಲಿ ಸಾರಿಗೆ ನೌಕರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು   

ಬಾಗೇಪಲ್ಲಿ: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಭಾನುವಾರ ಬಸ್‌ನಿಲ್ದಾಣದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಮಹಾತ್ಮ ಗಾಂಧೀಜಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಅರೆಬೆತ್ತಲೆಯಾಗಿ ಕುಳಿತು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು.

ತಾಲ್ಲೂಕಿನಲ್ಲಿ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸಿದರು.

ADVERTISEMENT

ಇದರಿಂದ ವಿವಿಧೆಡೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಬಂದ್ ಆಗಿದ್ದರಿಂದ ದೂರದ ಸ್ಥಳಗಳಿಗೆ ತೆರಳಬೇಕಿರುವ ಪ್ರಯಾಣಿಕರಿಗೆ ತೊಂದರೆಯಾಯಿತು. ಆಂಧ್ರಪ್ರದೇಶದ ಕಡೆಗೆ ಹೋಗುವ ಪ್ರಯಾಣಿಕರು ಬಸ್‌ಗಳು ಇಲ್ಲದೆ ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.