ADVERTISEMENT

ಬಾಗೇಪಲ್ಲಿ ಹೃದಯಾಘಾತಕ್ಕೆ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2025, 6:36 IST
Last Updated 23 ಡಿಸೆಂಬರ್ 2025, 6:36 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬಾಗೇಪಲ್ಲಿ: ಬಾಗೇಪಲ್ಲಿ ಪಟ್ಟಣದಲ್ಲಿ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ.

ಇಲ್ಲಿನ ಕುಂಬಾರಪೇಟೆಯ 19ನೇ ವಾರ್ಡ್ ನಿವಾಸಿ ಮಹಮ್ಮದ್ ಬಿಲಾಲ್ (51) ಹಾಗೂ 14ನೇ ವಾರ್ಡ್ ನಿವಾಸಿ ಮುಬೀನಾ (40) ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟವರು. 

ADVERTISEMENT

ಗೂಳೂರು ರಸ್ತೆಯಲ್ಲಿ ಚಪ್ಪಲಿ ವ್ಯಾಪಾರಿಯಾಗಿದ್ದ ಮಹಮ್ಮದ್ ಬಿಲಾಲ್ ಭಾನುವಾರ ಚಪ್ಪಲಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಭಾನುವಾರ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ಸೋಮವಾರ ಬೆಳಗಿನ ಜಾವ 5.30ರ ಸುಮಾರಿಗೆ ಮೊಹಮ್ಮದ್ ವಾಂತಿ ಮಾಡಿಕೊಂಡಿದ್ದು, ಆ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

ಅವರಿಗೆ ಪತ್ನಿ, ಒಬ್ಬ ಹೆಣ್ಣು ಮಗಳು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. 

ಗೃಹಿಣಿ ಮುಬೀನಾ ಅವರಿಗೂ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರಿಗೆ ಒಬ್ಬ ಹೆಣ್ಣು ಮಗಳು, ಒಂದು ಗಂಡು ಮಗು ಇದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.