
ಶಿಡ್ಲಘಟ್ಟ: ಸರ್ದಾರ್ ವಲ್ಲಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ನಗರದಲ್ಲಿ ತಾಲ್ಲೂಕು ಆಡಳಿತ, ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಏಕತಾ ಓಟ ಎಂಬ ಅಭಿಯಾನದೊಂದಿಗೆ ಆಚರಿಸಲಾಯಿತು.
ತಹಶೀಲ್ದಾರ್ ಎನ್. ಗಗನ ಸಿಂಧು ಮಾತನಾಡಿ, ಸ್ವತಂತ್ರ ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 550ಕ್ಕೂ ಹೆಚ್ಚು ಸಂಸ್ಥಾನಗಳನ್ನು ಭಾರತಕ್ಕೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಸಾಧನೆಯನ್ನು ಸ್ಮರಿಸಲು ಏಕತಾ ಓಟವನ್ನು ನಡೆಸಲಾಗುತ್ತದೆ. ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡುವ ಸಂಕಲ್ಪವನ್ನು ಜನರು ತೆಗೆದುಕೊಳ್ಳುವಂತೆ ಪ್ರೇರೇಪಿಸುವುದು ಈ ಓಟದ ಉದ್ದೇಶ ಎಂದು ಹೇಳಿದರು.
ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಶ್ರೀನಿವಾಸ್, ಪಿಎಸ್‌ಐ ವೇಣುಗೋಪಾಲ್, ನಗರಸಭೆ ಪೌರಾಯುಕ್ತೆ ಜಿ. ಅಮೃತ, ಪೊಲೀಸ್ ಸಿಬ್ಬಂದಿ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.