ADVERTISEMENT

ಕಪ್ಪುಪಟ್ಟಿ ಧರಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 8:16 IST
Last Updated 6 ಡಿಸೆಂಬರ್ 2020, 8:16 IST
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕರವೇ ಪದಾಧಿಕಾರಿಗಳು
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕರವೇ ಪದಾಧಿಕಾರಿಗಳು   

ಗೌರಿಬಿದನೂರು: ಮರಾಠ ಅಭಿವೃದ್ಧಿ ನಿಗಮ ರಚಿಸಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಕರವೇ(ಶಿವರಾಮೇಗೌಡ ಬಣ) ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ತಾಲ್ಲೂಕು ಅಧ್ಯಕ್ಷ ಆದಿಮೂರ್ತಿರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ
ನಡೆಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕೇವಲ ಮತ ಗಳಿಸುವುದಕ್ಕೆ ಆತುರದ ನಿರ್ಧಾರವಾದ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದು ಖಂಡನೀಯ ಎಂದರು.

ADVERTISEMENT

ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಶಿವಶಂಕರ್ ಆರಾಧ್ಯ, ತೊಂಡೇಭಾವಿ ಹೋಬಳಿಯ ಅಧ್ಯಕ್ಷ ಅಪ್ರೋಜ್, ಆಟೊ ಸಂಘದ ಅಧ್ಯಕ್ಷ ಗಂಗಾಧರ್, ಮಧು, ತಾಲ್ಲೂಕು ಉಪಾಧ್ಯಕ್ಷರಾದ ಶ್ರೀಕಂಠ, ಜನಾರ್ದನ್ ಪ್ರಸಾದ್, ವಿಶ್ವರಾಧ್ಯ, ಮಹಮ್ಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.