ಚಿಂತಾಮಣಿ: ತಾಲ್ಲೂಕಿನ ಪುರಾಣ ಪ್ರಸಿದ್ಧ ಆಲಂಬಗಿರಿ ಕಲ್ಕಿ ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪೂಜೆಯನ್ನು ಶುಕ್ರವಾರ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಲಕ್ಷ್ಮೀವೆಂಕಟರಮಣಸ್ವಾಮಿ ಉತ್ಸವ ವಿಗ್ರಹಕ್ಕೆ ಏಕಾದಶಿಯಂದು ವಿಶೇಷವಾಗಿ ಸೂರ್ಯಪ್ರಭಾ ವಾಹನದಲ್ಲಿ ವೇಣುಗೋಪಾಲ ಸ್ವಾಮಿಯ ವಿಶ್ವರೂಪದರ್ಶನ ಅಲಂಕಾರ ಮಾಡಲಾಗಿತ್ತು.
ಬೆಳಗ್ಗೆ ಘಂಟಾನಾದದೊಂದಿಗೆ ಪೂಜೆಗಳು ಆರಂಭವಾದವು. ನಂತರ ಸುಪ್ರಭಾತ, ಗೋಪೂಜೆಯನ್ನು ಶಾಸ್ತ್ರೋಕ್ತವಾಗಿ ನಡೆಸಲಾಯಿತು. ನಂತರ ಗರುಡಾಳ್ವಾರ್ ಪೂಜೆ ನೆರವೇರಿಸಿ ವೈಕುಂಠದ್ವಾರ ಪೂಜೆಯೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾದವು. ಸ್ವಾಮಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ವೆಂಕಟರಮಣಸ್ವಾಮಿಯ ಮೂಲ ವಿಗ್ರಹವನ್ನು ವಿಶೇಷ ಹೂಗಳಿಂದ ಸಿಂಗರಿಸಲಾಗಿತ್ತು.
ಹಲವಾರು ಕಲಾವಿದರುಗಳಿಂದ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಮ್ಮನವರ ದೇವಾಲಯದಲ್ಲಿಯೂ ವಿಶೇಷ ಪೂಜಾ ಕೈಂಕರ್ಯಗಳನ್ನು ಮಾಡಲಾಗಿತ್ತು.
ಇಂದು: ಆಲಂಬಗಿರಿಯಲ್ಲಿ ಶನಿವಾರ ಮುಕ್ಕೋಟಿ ದ್ವಾದಶಿ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ಸಂಕೀರ್ತನೆಯೊಂದಿಗೆ ಗರುಡೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.