ADVERTISEMENT

ಸಾದಲಿ: ವಾಲ್ಮೀಕಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 3:59 IST
Last Updated 22 ಅಕ್ಟೋಬರ್ 2021, 3:59 IST
ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ನಕ್ಕಲಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು
ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ನಕ್ಕಲಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು   

ಸಾದಲಿ: ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಈ ಭೂಮಿ ಮೇಲೆ ಜೀವರಾಶಿ ಇರುವ ತನಕವೂ ಪ್ರಚಲಿತದಲ್ಲಿ ಇರಲಿದೆ ಎಂದು ಎಬಿಡಿ ಗ್ರೂಪ್‌ ಅಧ್ಯಕ್ಷ ರಾಜೀವ್ ಗೌಡ ಅಭಿಪ್ರಾಯಪಟ್ಟರು.

ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ನಕ್ಕಲಹಳ್ಳಿ ಗ್ರಾಮದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಮಾಯಣವನ್ನು ಭಾರತ ಮಾತ್ರವಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದರು.

ADVERTISEMENT

ಕಾರ್ಯಕ್ರಮದ ನಂತರ ಜಿ. ನಕ್ಕಲಹಳ್ಳಿ, ಬೈರಗಾನಹಳ್ಳಿಯಲ್ಲಿ ದಿನಸಿ ಕಿಟ್ ವಿತರಿಸಲಾಯಿತು.‌ ಎಂ. ಮುರಳಿ, ಪ್ರಭಾಕರ್, ವಿಸ್ಡಮ್ ನಾಗರಾಜ್, ಹರೀಶ್, ಸಾಗರ್, ಶಂಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.