ADVERTISEMENT

ತರಕಾರಿಗಳು ಪೌಷ್ಟಿಕತೆಯ ಆಗರ: ಗೃಹ ವಿಜ್ಞಾನಿ ಭಾವನಾ ಸಲಹೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 2:47 IST
Last Updated 7 ಸೆಪ್ಟೆಂಬರ್ 2020, 2:47 IST
ಚಿಂತಾಮಣಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಪೌಷ್ಟಿಕ ಆಹಾರ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು
ಚಿಂತಾಮಣಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಪೌಷ್ಟಿಕ ಆಹಾರ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು   

ಚಿಂತಾಮಣಿ: ಅಂಗನವಾಡಿಗಳಲ್ಲಿ ಲಭ್ಯವಿರುವ ಜಾಗಕ್ಕನುಗುಣವಾಗಿ ಚೌಕ ಅಥವಾ ಆಯತಾಕಾರದ ಪಾತಿಗಳನ್ನು ಸಿದ್ಧಪಡಿಸಿಕೊಂಡು ತರಕಾರಿಗಳನ್ನು ಬೆಳೆದು ಬಳಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಭಾವನಾ ಸಲಹೆ ನೀಡಿದರು.

ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಪೌಷ್ಟಿಕ ಶಿಕ್ಷಣದ ಮೂಲಕ ನೂನ್ಯ ಪೋಷಣೆ ನಿರ್ವಹಣೆ’ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಹಾರದಲ್ಲಿ ತರಕಾರಿಗಳು ಪ್ರಮುಖ ಭಾಗವಾಗಿವೆ. ಇತರೆ ಆಹಾರ ಪದಾರ್ಥಗಳಿಗೆ ಹೋಲಿಸಿದರೆ ತರಕಾರಿಗಳಲ್ಲಿ ಅಧಿಕ ಪ್ರಮಾಣದಲ್ಲಿ ಜೀವಸತ್ವಗಳು, ಖನಿಜ ಲವಣಗಳು, ನಾರುಪದಾರ್ಥ ಮತ್ತು ವಿಷನಿವಾರಕಗಳು ಇರುವುದರಿಂದ ದೇಹಕ್ಕೆ ರಕ್ಷಣೆ ನೀಡುತ್ತವೆ ಎಂದು ಹೇಳಿದರು.

ADVERTISEMENT

ತರಕಾರಿಗಳನ್ನು ನಿತ್ಯ ಸೇವಿಸುವುದರಿಂದ ಸೂಕ್ಷ್ಮ ಪೋಷಕಾಂಶಗಳ ಕೊರತೆ ನೀಗಿಸಿ ಆರೋಗ್ಯವನ್ನು ಸುಸ್ಥಿತಿಯಲ್ಲಿಡುತ್ತವೆ. ತರಕಾರಿಗಳ ಜತೆಗೆ ಸಿರಿಧಾನ್ಯಗಳಿಂದ ಪೋಷಕಾಂಶ ಭರಿತ ಆಹಾರ ಪದಾರ್ಥಗಳನ್ನು ತಯಾರಿಸಿಕೊಂಡು ತಿನ್ನುವುದು ಉತ್ತಮ ಎಂದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎಂ.ಬೈರೇಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್ ಪಿ.ವೆಂಕಟರವಣ ಮಾತನಾಡಿದರು.

ಪೌಷ್ಟಿಕ ಭರಿತ ಸಿರಿಧಾನ್ಯಗಳಿಂದ ಚಾಕೊಲೇಟ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಿ ತೋರಿಸಿದರು. ತರಕಾರಿ ಬೀಜಗಳ ಕಿಟ್ ಮತ್ತು ಚಕ್ರಮುನಿ, ಕರಿಬೇವಿನ ಸಸಿಗಳನ್ನು ವಿತರಿಸಲಾಯಿತು. ಆರ್.ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.