
ಪ್ರಜಾವಾಣಿ ವಾರ್ತೆ
ಮಂಚೇನಹಳ್ಳಿ: ತಾಲ್ಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಶುಕ್ರವಾರ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರೈತ ಪುನೀತ್ ಕಡಿವಾಳ್ ಅವರ 28 ಗುಂಟೆ ಜಮೀನಿನ ಕ್ರಯ ಮಾಡಿಸಿಕೊಳ್ಳಲು ಕಿರಣ್ ಕುಮಾರ್ ₹10ಸಾವಿರ ಬೇಡಿಕೆ ಬೇಡಿಕೆ ಇಟ್ಟಿದ್ದರು. ₹8000ವನ್ನು ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿಸಿಕೊಳ್ಳುವ ವೇಳೆ ಗೌರಿಬಿದನೂರು ನಗರದ ಮಾದನಹಳ್ಳಿಯಲ್ಲಿರುವ ಅವರ ಮನೆಯಲ್ಲಿಯೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಈ ಕಾರ್ಯಾಚರಣೆ ಲೋಕಾಯುಕ್ತ ಎಸ್.ಪಿ ಅಂಟೋನಿ ಜಾನ್ ನೇತೃತ್ವದಲ್ಲಿ ಡಿವೈಎಸ್‌ಪಿ ವೀರೇಂದ್ರ ಕುಮಾರ್ ನೇತೃತ್ವದಲ್ಲಿ ನಡೆದಿದೆ. ಸಿಬ್ಬಂದಿ ಗುರು ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.