ADVERTISEMENT

ಗುಡಿಬಂಡೆ: ಗ್ರಾಮ ಆಡಳಿತಾಧಿಕಾರಿ ನಾಗರಾಜ್‌ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 14:07 IST
Last Updated 3 ಜುಲೈ 2025, 14:07 IST
<div class="paragraphs"><p>ನಾಗರಾಜ್</p></div>

ನಾಗರಾಜ್

   

ಗುಡಿಬಂಡೆ: ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ₹55 ಸಾವಿರ ಲಂಚ ಪಡೆದ ಗ್ರಾಮ ಆಡಳಿತಾಧಿಕಾರಿಯು  ಲೋಕಾಯುಕ್ತ ಅಧಿಕಾರಿಗಳಿಗೆ ಗುರುವಾರ ಸಿಕ್ಕಿಬಿದ್ದಿದ್ದಾರೆ. 

ಗುಡಿಬಂಡೆ ತಾಲ್ಲೂಕು ಕಚೇರಿಯ ಹಂಪಸಂದ್ರ ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ನಾಗರಾಜ್ ಲೋಕಾಯುಕ್ತರಿಂದ ಬಂಧನವಾದರು. 

ADVERTISEMENT

ಮಂಜುನಾಥ ಎಂಬುವರು ತಮ್ಮ ತಂದೆಗೆ ಸೇರಿದ 2.20 ಎಕರೆ ಜಮೀನು ಪೋಡಿ ಮಾಡಿಸಿಕೊಳ್ಳಲು ಮುಂದಾಗಿದ್ದರು. ಪೋಡಿ ಮಾಡಿಕೊಡಲು ಮಂಜುನಾಥ್ ಅವರ ಬಳಿ ಗ್ರಾಮ ಆಡಳಿತಾಧಿಕಾರಿ ನಾಗರಾಜ್ ₹55 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. 

ಈ ಪ್ರಕಾರ ಮಂಜುನಾಥ್ ಅವರು ಗುಡಿಬಂಡೆಯ ಐಬಿ ರಸ್ತೆಯ ಖಾಸಗಿ ಕಚೇರಿಯಲ್ಲಿ ನಾಗರಾಜ್ ಅವರಿಗೆ ಹಣ ನೀಡಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ನಾಗರಾಜ್ ಅವರನ್ನು ಬಂಧಿಸಿದ್ದಾರೆ. 

ಲೋಕಾಯುಕ್ತ ಡಿವೈಎಸ್‌ಪಿ ವೀರೇಂದ್ರ ಕುಮಾರ್. ಪಿ, ಇನ್‌ಸ್ಪೆಕ್ಟರ್ ನಿರ್ಮಲಾ ಅವರು ದಾಳಿ ನಡೆಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.