ADVERTISEMENT

ನಂದಿ | ಕೋಟ್ಪಾ ಕಾನೂನು ಉಲ್ಲಂಘನೆ: 184 ಪ್ರಕರಣ ದಾಖಲು

ನಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 19:45 IST
Last Updated 21 ಫೆಬ್ರುವರಿ 2020, 19:45 IST
ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಕಾಂಡಿಮೆಂಟ್‌ ಮಾಲೀಕರಿಗೆ ತಂಬಾಕು ನಿಷೇಧ ಕಾಯ್ದೆ ಅರಿವು ಮೂಡಿಸಿದರು.
ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಕಾಂಡಿಮೆಂಟ್‌ ಮಾಲೀಕರಿಗೆ ತಂಬಾಕು ನಿಷೇಧ ಕಾಯ್ದೆ ಅರಿವು ಮೂಡಿಸಿದರು.   

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ‘ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ’ (ಕೋಟ್ಪಾ) ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವ ಜತೆಗೆ ತಂಬಾಕು ನಿಷೇಧ ಕಾಯ್ದೆ ಅರಿವು ಮೂಡಿಸಿದರು.

ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಬಾಬುರೆಡ್ಡಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ ಅವರ ನೇತೃತ್ವದ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ತಂಡ ಚಹಾದ ಅಂಗಡಿಗಳು, ಕಾಂಡಿಮೆಂಟ್‌ಗಳು, ಸರಕು ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದವರು ಮತ್ತು ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 184 ಪ್ರಕರಣಗಳನ್ನು ದಾಖಲಿಸಿತು.

ಜತೆಗೆ ತಂಡ ತಾಲ್ಲೂಕಿನ ನಂದಿ ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಅಂಗಡಿಗಳ ಮಾಲೀಕರುಗಳಿಗೆ ಮಾಹಿತಿ ಪತ್ರ ವಿತರಿಸುವ ಮೂಲಕ ತಂಬಾಕು ಸೇವನೆ ದುಷ್ಪರಿಣಾಮದ ಬಗ್ಗೆ ತಿಳುವಳಿಕೆ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.