ADVERTISEMENT

ಗೌರಿಬಿದನೂರು: ಗೋಮಾಳ ಒತ್ತುವರಿ ತೆರವುಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 4:05 IST
Last Updated 1 ಜುಲೈ 2020, 4:05 IST
ಸಭೆಯಲ್ಲಿ ಭಾಗವಹಿಸಿದ್ದ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು
ಸಭೆಯಲ್ಲಿ ಭಾಗವಹಿಸಿದ್ದ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು   

ಗೌರಿಬಿದನೂರು: ತಾಲ್ಲೂಕು ಮತ್ತು ಜಿಲ್ಲೆಯಲ್ಲಿನ ಗೋಮಾಳ ಮತ್ತು ಸರ್ಕಾರಿ ಜಾಗ ಒತ್ತುವರಿಯಾಗುತ್ತಿದೆ. ಇದರ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ರಮ ತೆಗೆದುಕೊಂಡಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಘಟಕದ ಗೌರವಾಧ್ಯಕ್ಷ ಆನಂದ ತೀರ್ಥ ಹೇಳಿದರು.

ನಗರದ ಶನಿಮಹಾತ್ಮ ದೇವಾಲಯದ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್‌ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಸಾಗಾನಹಳ್ಳಿ ಶಿವಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಈ ಹಿಂದೆ ಇದ್ದ ತಹಶೀಲ್ದಾರ್ ಅವರು ಸುಮಾರು 150ಕ್ಕೂ ಹೆಚ್ಚು ಸ್ಮಶಾನ ಹಾಗೂ ಸರ್ಕಾರಿ ಸ್ವತ್ತುಗಳನ್ನು ಪರಭಾರೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಈ‌ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾಡಳಿತ ಗಮನಹರಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಮುಖಂಡ ರಮೇಶ್ ಬಾಬು, ಹಂಪಸಂದ್ರ ದೇವು, ಶಶಿಕುಮಾರ್, ಚಂದನ್, ರಮೇಶ್, ಗೌರಿಶಂಕರ್, ರಾಘವೇಂದ್ರ, ಶ್ರೀನಿವಾಸ್, ಕೃಷ್ಣಯ್ಯಶೆಟ್ಟಿ, ಅರುಣ್, ಲೋಕೇಶ್, ಮುದ್ದು, ನಂದೀಶ್, ವೆಂಕಟೇಶ್ ಮೂರ್ತಿ, ಚಂದ್ರಕೀರ್ತಿ, ಪರಮೇಶ್, ಮೃತ್ಯುಂಜಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.