ಚಿಕ್ಕಬಳ್ಳಾಪುರ: ನಗರ ಹೊರವಲಯದ ಅಮಾನಿ ಗೋಪಾಲಕೃಷ್ಣ ಕೆರೆ ಹಾಗೂ ಸೂಲಾಲಪ್ಪನ ದಿನ್ನೆ ಬಳಿ ಇರುವ ಅರಣ್ಯ ಇಲಾಖೆಯ ಉದ್ಯಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಸಕ ಡಾ.ಕೆ.ಸುಧಾಕರ್ ಮತ್ತು ಇಟಲಿಯ ವಾಸ್ತುಶಿಲ್ಪಿ ನಿಕೋಲಸ್ ಅವರು ಶನಿವಾರ ಕೆರೆ ಮತ್ತು ಉದ್ಯಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುಧಾಕರ್, ‘275 ಹೆಕ್ಟೇರ್ ಪ್ರದೇಶದಲ್ಲಿರುವ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಸರೋವರ, ಉದ್ಯಾನ ಮತ್ತು ಪಾದಚಾರಿ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಅರಣ್ಯ ಇಲಾಖೆಯ ಉದ್ಯಾನವನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ಮಾಜಿ ಶಾಸಕ ಶಿವಾನಂದ, ವಲಯ ಅರಣ್ಯಾಧಿಕಾರಿ ವಿಕ್ರಂ ರೆಡ್ಡಿ, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಪ್ರದೀಪ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.