ADVERTISEMENT

ಗೌರಿಬಿದನೂರು: ಶಾಲೆ ಪಕ್ಕದಲ್ಲೇ ಇದ್ದ ಬಾರ್ ಮುಚ್ಚಿಸಿದ ಮಹಿಳೆಯರು

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 2:50 IST
Last Updated 18 ಜುಲೈ 2025, 2:50 IST
ಗೌರಿಬಿದನೂರು ತಾಲ್ಲೂಕಿನ ತರಿದಾಳು ಗ್ರಾಮದಲ್ಲಿ ಬಾರ್ ನಿಂದ ತೊಂದರೆಯಾಗುತ್ತಿದೆ ಎಂದು ಗ್ರಾಮದ ಮಹಿಳೆಯರು ಬಾರ್ ನ್ನು ಮುಚ್ಚಿಸಿ ಪ್ರತಿಭಟನೆ ನಡೆಸಿದರು
ಗೌರಿಬಿದನೂರು ತಾಲ್ಲೂಕಿನ ತರಿದಾಳು ಗ್ರಾಮದಲ್ಲಿ ಬಾರ್ ನಿಂದ ತೊಂದರೆಯಾಗುತ್ತಿದೆ ಎಂದು ಗ್ರಾಮದ ಮಹಿಳೆಯರು ಬಾರ್ ನ್ನು ಮುಚ್ಚಿಸಿ ಪ್ರತಿಭಟನೆ ನಡೆಸಿದರು   

ಗೌರಿಬಿದನೂರು: ತಾಲ್ಲೂಕಿನ ತರಿದಾಳು ಗ್ರಾಮದಲ್ಲಿದ್ದ ಬಾರ್ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಿದ ಮಹಿಳೆಯರು ಬಾರ್ ಅನ್ನು ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಗ್ರಾಮದಲ್ಲಿರುವ ಎಂಎಸ್ಐಎಲ್ ಬಾರ್ ಸರ್ಕಾರಿ ಶಾಲೆ ಪಕ್ಕದಲ್ಲೇ ಇದೆ. ಇದರಿಂದ ಪ್ರತಿದಿನ ಇದೇ ರಸ್ತೆಯಲ್ಲಿ ಓಡಾಡುವ ಶಾಲಾ ಮಕ್ಕಳು, ಮಹಿಳೆಯರು, ಮತ್ತು ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಕೆಲವು ಕಿಡಿಗೇಡಿಗಳು ಬಾರ್‌ನಲ್ಲಿ ಮದ್ಯಪಾನ ಮಾಡಿ ಮಹಿಳೆಯರು ಮತ್ತು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಪ್ರತಿಭಟನಕಾರರು ದೂರಿದರು. 

ಕುಡುಕರ ಕಿರಿಕಿರಿಯಿಂದಾಗಿ ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ಬರಲು ಭಯಪಡುತ್ತಿದ್ದಾರೆ. ವಿದ್ಯಾರ್ಥಿನಿಯರು ಮನೆಯವರಿಗೆ ಕರೆ ಮಾಡಿ ತಮ್ಮನ್ನು ಮನೆಗೆ ಕರೆದೊಯ್ಯಲು ಕೇಳಿಕೊಳ್ಳುವಂತಾಗಿದೆ. ಮೂರು ವರ್ಷಗಳಲ್ಲಿ ಕುಡಿದು ಸಣ್ಣ ವಯಸ್ಸಿನ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಕುರಿತು ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಹಿಳಾ ಪ್ರತಿಭಟನಕಾರರು ದೂರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.