ADVERTISEMENT

ತಂಬಾಕು ಕ್ಯಾನ್ಸರ್‌ ಕಾರಕ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 16:53 IST
Last Updated 3 ಜೂನ್ 2020, 16:53 IST
ಗೌರಿಬಿದನೂರಿನಲ್ಲಿ  ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಗೌರಿಬಿದನೂರಿನಲ್ಲಿ  ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಗೌರಿಬಿದನೂರು: ತಂಬಾಕು ಉತ್ಪನ್ನಗಳಲ್ಲಿ ಸುಮಾರು 60ಕ್ಕಿಂತ ಹೆಚ್ಚು ಕ್ಯಾನ್ಸರ್‌ಕಾರಕ ರಾಸಾಯನಿಕಗಳಿವೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಒ. ರತ್ನಮ್ಮ ಹೇಳಿದರು.

ತಾಲ್ಲೂಕು ಅರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಮಾತನಾಡಿದರು.

ಈ ರಾಸಾಯನಿಕಗಳಿಂದ ಮುಖ್ಯವಾಗಿ ಕುರುಡುತನ, ಕಣ್ಣಿನ ಮೇಲೆ ದುಷ್ಟರಿಣಾಮ, ಚರ್ಮವು ಸುಕ್ಕು ಕಟ್ಟುವುದು, ದಂತಕ್ಷಯ, ಹಲ್ಲು ಹಳದಿ ಬಣ್ಣಕ್ಕೆ ತಿರುಗುವುದು. ಜೊತೆಗೆ ಹೃದಯಘಾತ ಹೆಚ್ಚಾಗುವ ಸಂಭವವಿದೆ ಎಂದು ಹೇಳಿದರು.

ADVERTISEMENT

ತಹಸೀಲ್ದಾರ್ ಎಂ. ರಾಜಣ್ಣ , ತಂಬಾಕು ಉತ್ಪನ್ನಗಳ ಉದ್ದಿಮೆಗಳು, ಮಾರಾಟಗಾರರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ) ಪಾಲಿಸಬೇಕು ಎಂದರು.

ಸೆಕ್ಷನ್ 4ರ ಅಡಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಮತ್ತು ಪರೋಕ್ಷ ಜಾಹೀರಾತನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶ್ರೀನಿವಾಸ್, ವೈದ್ಯರಾದ ಡಾ.ಚಂದ್ರಮೋಹನ್, ಆರೋಗ್ಯ ಸಹಾಯಕ ಅಧಿಕಾರಿ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.