ADVERTISEMENT

ಗೌರಿಬಿದನೂರು: ತಂಬಾಕು ವಿರೋಧಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 15:57 IST
Last Updated 31 ಮೇ 2025, 15:57 IST
ಗೌರಿಬಿದನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಂಬಾಕು ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು
ಗೌರಿಬಿದನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಂಬಾಕು ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು   

ಗೌರಿಬಿದನೂರು: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ತಂಬಾಕು ದಿನಾಚರಣೆಯನ್ನು ಆರೋಗ್ಯ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಮೋಹನ್ ರೆಡ್ಡಿ ಮಾತನಾಡಿ, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮ
ಬೀರುತ್ತವೆ. ದುಶ್ಚಟಗಳಿಗೆ ಬಲಿಯಾಗಬಾರದು. ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಳ್ಳಬೇಕು. ಸಿಗರೇಟ್, ಗುಟ್ಕಾ ಸೇವನೆಯಿಂದ ಕ್ಯಾನ್ಸರ್‌ನಂತಹ ಸಾವಿಗೆ ತಂದೊಡ್ದುವ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದರು.

ಫಯಾಜ್ ಪಟೇಲ್ ಮಾತನಾಡಿ, ಕಾಲೇಜು ದಿನಗಳಲ್ಲಿ ದುಶ್ಚಟಗಳಿಗೆ ಆಕರ್ಷಣೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಿಗರೇಟ್, ಗುಟ್ಕಾ ಮುಂತಾದ ತಂಬಾಕುಯುಕ್ತ ಪದಾರ್ಥ ಸೇವಿಸುವುದನ್ನು ತ್ಯಜಿಸಬೇಕು ಎಂದರು.

ADVERTISEMENT

ವಕೀಲರ ಸಂಘದ ಅಧ್ಯಕ್ಷ ದಿನೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮಾ ಶಂಕರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.