
ಪ್ರಜಾವಾಣಿ ವಾರ್ತೆ
ಬಾಗೇಪಲ್ಲಿ(ಚಿಕ್ಕಬಳ್ಳಾಪುರ): ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಸ್ತೆ-44 ಚೆಕ್ ಪೋಸ್ಟ್‌ನಲ್ಲಿ ಬುಧವಾರ ರಾತ್ರಿ ಪೊಲೀಸರು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಭಾವಚಿತ್ರವುಳ್ಳ 96 ಕೈಗಡಿಯಾರಗಳನ್ನು ವಶಪಡಿಸಿಕೊಂಡಿದ್ದಾರೆ.
ಆನಂತಪುರಂ ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿನಲ್ಲಿ 96 ಕೈಗಡಿಯಾರಗಳನ್ನು ಪತ್ತೆಯಾಗಿವೆ. ದಾಖಲೆಗಳು ಇಲ್ಲದ ಕಾರಣ ವಶಕ್ಕೆ ಪಡೆಯಲಾಗಿದೆ. ಆನಂತಪುರಂ ಬಂಡಿ ನಾಗೇಂದ್ರ ಎಂಬುವವರ ವಿರುದ್ಧ ಬಾಗೇಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.