ADVERTISEMENT

ಚಿಕ್ಕಬಳ್ಳಾಪುರ: ಸಾಹಿತಿ ರಂಗಾರೆಡ್ಡಿ ಕೋಡಿರಾಂಪುರ ನಿಧನ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 5:04 IST
Last Updated 24 ಅಕ್ಟೋಬರ್ 2021, 5:04 IST
ರಂಗಾರೆಡ್ಡಿ ಕೋಡಿರಾಂಪುರ
ರಂಗಾರೆಡ್ಡಿ ಕೋಡಿರಾಂಪುರ    

ಚಿಕ್ಕಬಳ್ಳಾಪುರ: ಸಾಹಿತಿ ರಂಗಾರೆಡ್ಡಿ ಕೋಡಿರಾಂಪುರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಕೋಡಿರಾಂಪುರದ ಅವರು ಗೌರಿಬಿದನೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಿವೃತ್ತಿ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು.

ಜನಪದ ಸಂಸ್ಕೃತಿ, ಸಾಲು ಹೊಂಗೆಯ ತಂಪು, ಬಂಡಾಯ ಜನಪದ, ನನ್ನೂರ ಹಾಡು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದರು‌.

ADVERTISEMENT

ಚಿಕ್ಕಬಳ್ಳಾಪುರದಲ್ಲಿ 2015ರಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲಾ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಯಕ್ಷಗಾನ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ,ಜಾನಪದ ಅಕಾಡೆಮಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.