ADVERTISEMENT

ಯುವಜನತೆ ದೇಶದ ಭವಿಷ್ಯದ ಸಂಪತ್ತು: ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ

ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಯುವ ಸ್ಪಂದನ ಅರಿವು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 12:01 IST
Last Updated 29 ಸೆಪ್ಟೆಂಬರ್ 2020, 12:01 IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಅವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಅವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ತಂತ್ರಜ್ಞಾನದ ಹಾವಳಿಯಲ್ಲಿ ಮಾನವ ಎಲ್ಲವನ್ನು ಪಡೆದುಕೊಳ್ಳುವ ಹಠದಲ್ಲಿ ಜೀವನ ನಿರ್ಣಯ ಮರೆತಿದ್ದಾನೆ. ಯುವ ಜನತೆ ದೇಶದ ಆಸ್ತಿ, ಭವಿಷ್ಯದಲ್ಲಿ ಸಮರ್ಥ ಜೀವನ ರೂಪಿಸಿಕೊಳ್ಳಲು ಯುವಜನರು ಯುವ ಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಹೇಳಿದರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಪೂರ್ಣ ಪ್ರಜ್ಞಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಯುವ ಸ್ಪಂದನ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಧುನಿಕ ತಂತ್ರಜ್ಞಾನ ಯುಗದಲ್ಲಿ ಯುವಜನತೆ ಡ್ರಗ್ಸ್, ಗಾಂಜಾಗಳಂತಹ ಕೆಟ್ಟ ಚಟಗಳಿಗೆ ಬಲಿಯಾಗಿ ತಮ್ಮ ಉತ್ತಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಯುವಜನತೆ ದೇಶದ ಸಂಪತ್ತು, ಭವಿಷ್ಯದ ಗುರಿ ಕಡೆ ಆಲೋಚಿಸಬೇಕು. ಜೀವನದಲ್ಲಿ ಏನಾದರೂ ಸಾಧಿಸುವ ಗುರಿ ಹೊಂದಿರಬೇಕು’ ಎಂದು ತಿಳಿಸಿದರು.

ADVERTISEMENT

‘ಯುವ ಜನರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ ಯುವಸ್ಪಂದನ ಕೇಂದ್ರದಿಂದ ಮಾರ್ಗದರ್ಶನ ನೀಡಲಾಗುತ್ತದೆ. ಏನೇ ಸಮಸ್ಯೆ, ತೊಂದರೆ ಇದ್ದಲ್ಲಿ ಯುವಸ್ಪಂದನ ಉಚಿತವಾಗಿ ನೆರವು ದೊರೆಯಲಿದೆ’ ಎಂದರು.

ಯುವ ಸ್ಪಂದನ ಕೇಂದ್ರದ ಯುವ ಪರಿವರ್ತಕ ಮುನಿನಾರಾಯಣಸ್ವಾಮಿ ಮಾತನಾಡಿ, ‘ಯುವಸ್ಪಂದನ ಉತ್ತಮ ಕಾರ್ಯಕ್ರಮವಾಗಿದ್ದು, ಇಲ್ಲಿ ಆರೋಗ್ಯ ಮತ್ತು ಜೀವನ ಶೈಲಿ, ಸಂಬಂಧಗಳು, ವ್ಯಕ್ತಿತ್ವ ಬೆಳವಣಿಗೆ, ಮತ್ತು ವೃತ್ತಿ ಹಾಗೂ ಶಿಕ್ಷಣ, ಲಿಂಗ ಮತ್ತು ಲೈಂಗಿಕತೆ, ಭಾವನೆಗಳು, ಸಂಬಂಧಗಳು, ಸಂವಹನ, ಸುರಕ್ಷತೆಯ ಬಗ್ಗೆ ಉಚಿತವಾಗಿ ಮಾರ್ಗದರ್ಶನ ನೀಡಲಾಗುತ್ತದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಸಮಾಲೋಚಕಿ ಸೌಮ್ಯಾ, ಶಾಲೆಯ ಶಿಕ್ಷಕ ವರ್ಗದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.