ADVERTISEMENT

ಅರ್ಹರಿಗೆ ಸೌಲಭ್ಯ ತಲುಪಿಸಿ: ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2012, 8:35 IST
Last Updated 13 ಏಪ್ರಿಲ್ 2012, 8:35 IST

ಚಿಕ್ಕಮಗಳೂರು: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಚುನಾಯಿತ ಪ್ರತಿನಿಧಿ ಗಳೊಂದಿಗೆ ಅಧಿಕಾರಿಗಳು ಗ್ರಾಮಗಳ ಅಗತ್ಯ ಕೆಲಸಗಳ ಬಗ್ಗೆ ಚರ್ಚಿಸಬೇಕು. ಪ್ರಸಕ್ತ ಸಾಲಿನಲ್ಲೂ ಬಿಡುಗಡೆಯಾಗುವ ಅನುದಾನವನ್ನು ಸಮರ್ಪ ಕವಾಗಿ ಅಗತ್ಯವಿರುವ ಕಡೆಗಳಲ್ಲಿ ಬಳಸಬೇಕು ಎಂದರು.

ಸರ್ಕಾರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಗ್ರಾಮಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿದರೆ ಚುನಾಯಿತ ಪ್ರತಿನಿಧಿಗಳಿಗೂ ಗೌರವ ಬರುತ್ತದೆ ಎಂದು ಹೇಳಿದರು.

ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸುವಾಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಬೇಕು. ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಉಪಾಧ್ಯಕ್ಷರಾದ ರೀನು ಶಿವರಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಅಂಬಿಕಾ ಶಿವಕುಮಾರ್, ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ ಹಾಗೂ ಇತರೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.